
ಉಡುಪಿ: ಭವ್ಯ ಪ್ರವಾಸೋದ್ಯಮವನ್ನು ಸಾರ್ವಜನಿಕ ಪ್ರವೇಶಕ್ಕೆ ಮುಕ್ತಗೊಳಿಸುವಂತೆ ಆಗ್ರಹಿಸಿ ಕಾರ್ಕಳ ಬಿಜೆಪಿಯಿಂದ ವಾಹನ ಜಾಥಾ
ಉಡುಪಿ : ಭಾರತೀಯ ಜನತಾ ಪಾರ್ಟಿ ಕಾರ್ಕಳದ ವತಿಯಿಂದ ಭವ್ಯ ಪ್ರವಾಸೋದ್ಯಮವನ್ನು ಸಾರ್ವಜನಿಕ ಪ್ರವೇಶಕ್ಕೆ ಮುಕ್ತಗೊಳಿಸಬೇಕು. ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಶೀಘ್ರ ಆರಂಭಿಸಬೇಕು ಎಂದು ಒತ್ತಾಯಿಸಿ ಕಾರ್ಕಳ ಸ್ವರಾಜ್ ಮೈದಾನದಿಂದ ಉಡುಪಿಯ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಬೃಹತ್ ವಾಹನ ಜಾಥಾ ನಡೆಯಿತು.
ವಾಹನ ಜಾಥಾಗೆ ಹಿರಿಯ ಬಿಜೆಪಿ ಮುಖಂಡ ಬೋಳ ಪ್ರಭಾಕರ್ ಕಾಮತ್ ಚಾಲನೆ ನೀಡಿದರು. ಜಾಥಾದಲ್ಲಿ ಭಾಗವಹಿಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ವಿರುದ್ಧ ಘೋಷಣೆ ಕೂಗಿದರು.ಪರಶುರಾಮ ಥೀಮ್ ಪಾರ್ಕ್ ಕುರಿತ ಕಾಂಗ್ರೆಸ್ ಮುಖಂಡರ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ ಸುನಿಲ್ ಕುಮಾರ್ , ಸರಕಾರ ಥೀಮ್ ಪಾರ್ಕ್ ಗೆ ಬೇಕಾದ ಅಗತ್ಯ ಅನುದಾನ ಬಿಡುಗಡೆ ಮಾಡದೇ ಇರುವುದಕ್ಕೆ ಅಸಾಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಕಳ ಕ್ಷೇತ್ರಾಧ್ಯಕ್ಷ ನವೀನ್ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು, ನಗರಾಧ್ಯಕ್ಷ ರವೀಂದ್ರ ಮೊಯಿಲಿ, ಅಲ್ಪಸಂಖ್ಯಾತ ಮೋರ್ಚಾದ ಮುಸ್ತಫಾ ಜಾರ್ಕಳ, ಭರತ್ ಜೈನ್, ಶೀತಲ್ ಜೈನ್, ಕುಕ್ಕುಂದೂರು ಪಂಚಾಯತ್ ಮಾಜಿ ಅಧ್ಯಕ್ಷ, ಎ ಪಿ ಎಂ ಸಿ ಮಾಜಿ ಅಧ್ಯಕ್ಷ ಅಂಥೋನಿ ಡಿಸೋಜಾ ನಕ್ರೆ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಂತೋಷ ಪೂಜಾರಿ, ನಿಟ್ಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತಿನ್ ಸಾಲ್ಯಾನ್, ಸದಸ್ಯರಾದ ಆತ್ಮನಂದ, ಸಂತೋಷ ಶೆಟ್ಟಿ, ಬಿಜೆಪಿ ಮುಖಂಡ ಬೋಳ ಶ್ರೀನಿವಾಸ್ ಕಾಮತ್, ಬಿಜೆಪಿ ವಕ್ತಾರ ಹರೀಶ್ ಶೆಣೈ, ಬೋಳ ಜಯರಾಮ್ ಸಾಲ್ಯಾನ್, ಸಾಣೂರ್ ಕರುಣಾಕರ ಪೂಜಾರಿ ಮತ್ತಿತರರು ಇದ್ದರು.