ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಕಲಾಭವನ್ ನವಾಸ್  ಹೋಟೆಲ್ ನಲ್ಲಿ ಶವವಾಗಿ ಪತ್ತೆ !

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಕಲಾಭವನ್ ನವಾಸ್ ಹೋಟೆಲ್ ನಲ್ಲಿ ಶವವಾಗಿ ಪತ್ತೆ !

 

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಕಲಾಭವನ್ ನವಾಸ್ (51) ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ.

ಕಲಾಭವನ್ ಅವರು ಸಿನೆಮಾವೊಂದರ ಚಿತ್ರೀಕರಣಕ್ಕಾಗಿ ಕೊಚ್ಚಿಯ ಚೊಟ್ಟನಿಕ್ಕಾರದಲ್ಲಿರುವ ಹೋಟೆಲ್‌ನಲ್ಲಿ ತಂಗಿದ್ದರು. ಆದರೆ ಶುಕ್ರವಾರ ಸಂಜೆ ಹೋಟೆಲ್ ಕೊಠಡಿಯಲ್ಲೇ ಅಸ್ವಸ್ಥರಾಗಿ ಬಿದ್ದಿದ್ದು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪರಿಶೀಲನೆ ನಡೆಸಿದ ವೇಳೆ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ನಟ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು ಇಂದು (ಶನಿವಾರ) ಕಲಾಮಸ್ಸೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಕಲಾಭವನ್ ಅವರ ಮೃತದೇಹವನ್ನು ಚೊಟ್ಟನಿಕ್ಕರದ ಎಸ್‌ಡಿ ಟಾಟಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.ಹೋಟೆಲ್ ಸಿಬ್ಬಂದಿ ನೀಡಿದ ಮಾಹಿತಿ ಪ್ರಕಾರ 'ಪ್ರಕಂಬನಂ' ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ನಟ ಕಲಾಭವನ್‌ ಅವರು ಹೋಟೆಲ್‌ನಲ್ಲಿ ತಂಗಿದ್ದರು. ಶುಕ್ರವಾರ ಸಂಜೆಯವರೆಗೂ ಹೋಟೆಲ್ ಕೊಠಡಿಯಿಂದ ಹೊರಗೆ ಬಾರದೇ ಇದ್ದುದರಿಂದ ಸಿಬ್ಬಂದಿ ಹೋಗಿ ಕರೆದಾಗ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಇದರಿಂದ ಅನುಮಾನಗೊಂಡ ಸಿಬ್ಬಂದಿ ಹೋಟೆಲ್ ನ ಇತರ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಬಳಿಕ ಬಾಗಿಲು ತೆರೆದು ನೋಡಿದ ವೇಳೆ ನಟ ಪ್ರಜ್ಞಾಹೀನರಾಗಿ ಬಿದ್ದಿರುವುದು ಕಂಡುಬಂದಿದೆ.ಬಳಿಕ ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಆಗಲೇ ಮೃತಪಟ್ಟಿದ್ದರು.

Ads on article

Advertise in articles 1

advertising articles 2

Advertise under the article