ಬೆಳಗಾವಿ: ಮುಸ್ಲಿಂ ಧರ್ಮದ ಮುಖ್ಯ ಶಿಕ್ಷಕನನ್ನು ವರ್ಗಾವಣೆ ಮಾಡಲು ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ದುಷ್ಕರ್ಮಿಗಳು !

ಬೆಳಗಾವಿ: ಮುಸ್ಲಿಂ ಧರ್ಮದ ಮುಖ್ಯ ಶಿಕ್ಷಕನನ್ನು ವರ್ಗಾವಣೆ ಮಾಡಲು ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ದುಷ್ಕರ್ಮಿಗಳು !

ಬೆಳಗಾವಿ: ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಮುಸ್ಲಿಂ ಧರ್ಮಕ್ಕೆ ಸೇರಿದ ಮುಖ್ಯ ಶಿಕ್ಷಕನನ್ನು ಬೇರೆಡೆಗೆ ವರ್ಗ ಮಾಡಿಸಲು ಹೀನ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ 15 ದಿನಗಳ ಹಿಂದೆ ವಿಷಯುಕ್ತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥಗೊಂಡಿದ್ದರು. ಈ ಪ್ರಕರಣದಲ್ಲಿ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಅಧ್ಯಕ್ಷ ಹೂಲಿಕಟ್ಟಿ ಗ್ರಾಮದ ಸಾಗರ ಪಾಟೀಲ, ಕೃಷ್ಣಾ ಮಾದರ, ನಾಗನಗೌಡ ಪಾಟೀಲನನ್ನು ಬಂಧಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಭೀಮಾಶಂಕರ ಗುಳೇದ ಸುದ್ದಿಗೋಷ್ಠಿ ನಡೆಸಿ, ಮುಖ್ಯ ಶಿಕ್ಷಕನನ್ನು ಶಾಲೆಯಿಂದ ಓಡಿಸಲು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ವಿಷ ಮಿಶ್ರಿತ ನೀರುಸೇವಿಸಿ ಮಕ್ಕಳು ಮೃತ ಮೃತಪಟ್ಟರೆ ಅದಕ್ಕೆ ಮುಖ್ಯ ಶಿಕ್ಷಕ ಹೊಣೆಯಾಗಿ ಬೇರೆ ಕಡೆ ವರ್ಗಾವಣೆ ಆಗುತ್ತಾರೆ ಎಂದು ಬಂಧಿತರು ಸಂಚು ರೂಪಿಸಿದ್ದರು ಎಂದರು.

ಆರೋಪಿಸಾಗರ ಪಾಟೀಲ ವಿಷ ಬೆರೆಸಲು ಕೃಷ್ಣಾ ಮಾದರ ಎಂಬಾತನಿಗೆ ಹೇಳಿದ್ದ. ಕೃಷ್ಣಾ ಅನ್ಯಜಾತಿ ಹುಡುಗಿಯನ್ನು ಪ್ರೀತಿಸುತ್ತಿರುವ ಸಂಗತಿ ತಿಳಿದಿದ್ದ ಆರೋಪಿಗಳು ನಾವು ಹೇಳುವ ಕೆಲಸ ಮಾಡದಿದ್ದರೆ ನಿನ್ನ ಪ್ರೀತಿಯ ವಿಷಯ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಹೆದರಿ ನೀರಿನಲ್ಲಿ ವಿಷ ಬೆರೆಸಲು ಕೃಷ್ಣಾ ಒಪ್ಪಿಕೊಂಡಿದ್ದ. ಶಾಲೆಯ ಬಾಲಕನಿಗೆ ಚಾಕೋಲೆಟ್, ಕುರ್‌ಕುರೆ ಮತ್ತು 500ರೂ. ನೀಡಿ ಕೃತ್ಯಕ್ಕೆ ಪ್ರಚೋದನೆ ನೀಡಿದ್ದರು. ಆಮಿಷಕ್ಕೆ ಒಳಗಾಗಿದ್ದ ಬಾಲಕ ಶಾಲಾ ಆವರಣದಲ್ಲಿದ್ದ ಟ್ಯಾಂಕರ್‌ನಲ್ಲಿ ವಿಷ ಬೆರೆಸಿ ಬಾಟಲಿ ಅಲ್ಲೇ ಎಸೆದಿದ್ದ.

Ads on article

Advertise in articles 1

advertising articles 2

Advertise under the article