
ಉಡುಪಿ: ಕುಸಿದುಬಿದ್ದು ವಲಸೆ ಕಾರ್ಮಿಕ ಸಾವು`
19/08/2025 06:30 AM
ಉಡುಪಿ: ಸಿಟಿ ಬಸ್ ನಿಲ್ದಾಣದ ಪಾದಚಾರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ತಕ್ಷಣ ಸಾರ್ವಜನಿಕರ ನೆರವಿನಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಮೃತಪಟ್ಟಿದ್ದಾರೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ. ವಲಸೆ ಕಾರ್ಮಿಕ ಎಂದು ಶಂಕಿಸಲಾಗಿದೆ. ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಅಥವಾ ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.