
ಧರ್ಮಸ್ಥಳ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮೌನ ಪ್ರತಿಭಟನೆ
01/08/2025 01:24 PM
ಉಡುಪಿ: ಧರ್ಮಸ್ಥಳದಲ್ಲಿ ನಡೆದ ಶಂಕಿತ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಲೋಕಸಭೆಯಲ್ಲಿ ಮಹಿಳಾ ಲೋಕಸಭಾ ಸದಸ್ಯರು ದ್ವನಿ ಎತ್ತಬೇಕು ಎಂದು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯದಾದ್ಯಂತ ಪ್ರತಿಭಟನಾ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲೆ ವತಿಯಿಂದ ಕಾಪು ಬಸ್ ನಿಲ್ದಾಣ ಹಾಗೂ ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಬಿತ್ತಿಪತ್ರವನ್ನು ಪ್ರದರ್ಶಿಸುವ ಮೂಲಕ ಮೌನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.
ಪ್ರತಿಭಟನೆಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ನಾಝಿಯಾ ನಸ್ರುಲ್ಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹಮತುನ್ನೀಸ, ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಸೀನಾ, ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಫರ್ಜಾನಾ ಹಮೀದ್ ಹಾಗೂ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಸಮಿತಿ ಸದಸ್ಯೆ ನಸೀಮ್ ಫಾತಿಮಾ ಹಾಗೂ ವಿಮ್ ಸದಸ್ಯರು ಬಾಗವಹಿಸಿದ್ದರು.