
ಸಾಸ್ತಾನ ಟೋಲ್ ಗೇಟ್ ಬಳಿಯ ಸೂಚನಾಫಲಕದ ಕಂಬಕ್ಕೆ ಡಿಕ್ಕಿ ಹೊಡೆದ ಸರಕಾರಿ ಬಸ್ - ಹಲವರಿಗೆ ಗಾಯ
24/08/2025 05:06 AM
ಬ್ರಹ್ಮಾವರ: ಬೆಳ್ಳಂಬೆಳಿಗ್ಗೆ ಸಾಸ್ತಾನ ಟೋಲ್ ಗೇಟ್ ಬಳಿಯ ಕಂಬಕ್ಕೆ ಸರಕಾರಿ ಬಸ್ಸೊಂದು ಡಿಕ್ಕಿ ಹೊಡೆದಿದ್ದು ಹಲವರು ಗಾಯಗೊಂಡ ಘಟನೆ ಸಂಭವಿಸಿದೆ. ಅಪಘಾತ ಸಂದರ್ಭ ಬಸ್ ನಲ್ಲಿ ಸುಮಾರು 36 ಪ್ರಯಾಣಿಕರಿದ್ದರು. ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿದ ಬಸ್ ಟೋಲ್ ಗೇಟ್ ಸಮೀಪದ ಕಂಬಕ್ಕೆ ಡಿಕ್ಕಿ ಹೊಡೆಯಿತು. ಘಟನೆಯಲ್ಲಿ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಸುಮಾರು 13 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸ್ಥಳೀಯ ಅಂಬ್ಯುಲೆನ್ಸ್ ಚಾಲಕ ಮತ್ತು ಟೋಲ್ ಅಂಬ್ಯುಲೆನ್ಸ್ ಕಾರ್ಯಾಚರಣೆ ನಡೆಸಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.