ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕನಾಗಿ( ಪೂರ್ಣಾವಧಿ) ಡಾ.ಎಂ.ಎ. ಸಲೀಂ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕನಾಗಿ( ಪೂರ್ಣಾವಧಿ) ಡಾ.ಎಂ.ಎ. ಸಲೀಂ ನೇಮಕ

 


ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನೂತನ ಮುಖ್ಯಸ್ಥರಾಗಿ (ಡಿಜಿ ಮತ್ತು ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಎ. ಸಲೀಂ ಅವರನ್ನು ನೇಮಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಈ ಹಿಂದೆ ಅವರು ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಪೂರ್ಣಾವಧಿಗೆ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.ನೇಮಕ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ಮೂಲಕ ಖಾಲಿಯಿದ್ದ ಪೊಲೀಸ್ ಮಹಾನಿರ್ದೇಶಕರ ಹುದ್ದೆಯನ್ನು ಈಗ ಭರ್ತಿ ಮಾಡಲಾಗಿದೆ.1993ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಡಾ. ಎಂ. ಎ. ಸಲೀಂ ಅವರು, ಈ ಹಿಂದೆ ಅಪರಾಧ ತನಿಖಾ ದಳ (ಸಿಐಡಿ), ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಸೇವೆ ಸಲ್ಲಿಸುತ್ತಿದ್ದರು. ಇದೀಗ ಅವರನ್ನು ರಾಜ್ಯ ಪೊಲೀಸ್‌ ಪಡೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article