
ಉಡುಪಿ: ಗಣೇಶ ಚತುರ್ಥಿ ಪ್ರಯುಕ್ತ ಮದ್ಯ ಮಾರಾಟ ನಿಷೇಧ
ಉಡುಪಿ: ಆ. 27 ರಿಂದ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಪ್ರಯುಕ್ತ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಉಪ-ವಿಭಾಗದಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯಲಿದೆ. ಈ ಪ್ರಯುಕ್ತ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭದಲ್ಲಿ ಮದ್ಯಪಾನ ಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಆ.27 ರಂದು ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ಆ.29 ಮತ್ತು ಆ. 31 ರಂದು ಅಪರಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಲಾದ ದಿನಾಂಕದಂದು ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ಒಣದಿನ (Dry Day) ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.