ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

 


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಇಂದು ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ನವದೆಹಲಿಯ ರಾಮ್ ಮನೋಹ‌ರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆಯ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಲಿಕ್ ಅವರು ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ  ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿಯೇ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಮತ್ತು ಆಗಸ್ಟ್ 5, 2019 ರಂದು ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಯಿತು.

Ads on article

Advertise in articles 1

advertising articles 2

Advertise under the article