ಉಡುಪಿ: ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ- ತಿಮರೋಡಿಗೆ ಜಾಮೀನು ಮಂಜೂರು
23/08/2025 12:18 PM
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.