
ಧರ್ಮಸ್ಥಳ: ಅನಾಮಿಕ ಮುಸುಕುದಾರಿ ಚಿನ್ನಯ್ಯ ಅಲಿಯಾಸ್ ಚೆನ್ನ ಅಸಲಿ ಮುಖ ಬಹಿರಂಗ !
23/08/2025 09:07 AM
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದೇನೆ ಎಂದು ದೂರು ನೀಡಿ, ಎಸ್‌ಐಟಿ ತಂಡ ಮುಂದೆ 17 ಸ್ಥಳಗಳನ್ನು ತೋರಿಸಿ ಗುಂಡಿ ಅಗೆಸಿದ ಅನಾಮಿಕನ ಬಂಧನವಾಗಿದೆ. ಇದರ ಬೆನ್ನಲ್ಲಿಯೇ ಮುಸುಕುಧಾರಿ ಅನಾಮಿಕನ ಫೋಟೋ ರಿವೀಲ್ ಆಗಿದೆ.ಧರ್ಮಸ್ಥಳದ ಕೇಸಿನಲ್ಲಿ ನಾನೊಬ್ಬ ಸಾಕ್ಷಿದಾರ ಎಂದು ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಪೊಲೀಸರಿಂದ ರಕ್ಷಣೆ ಪಡೆದುಕೊಂಡಿದ್ದ ಅನಾಮಿಕನನ್ನು ಪೊಲೀಸರು ಬಂಧನ ಮಾಡದೇ, ವಶಕ್ಕೂ ಪಡೆಯದೇ ಆತನನ್ನು ಸ್ವತಂತ್ರವಾಗಿ ಬಿಟ್ಟಿದ್ದರು. ಆದರೆ, ಆತನಿಗೆ ನೀಡಲಾಗಿದ್ದ ಸಾಕ್ಷಿ ಸಂರಕ್ಷಣಾ ಕಾಯ್ದೆಯನ್ನು ರದ್ದುಗೊಳಿಸಿದ ಬೆನ್ನಲ್ಲಿಯೇ ಮುಸುಕುದಾರಿ ಅನಾಮಿಕನನ್ನು ಬಂಧನ ಮಾಡಲಾಗಿತ್ತು. ಇದಾದ ನಂತರ ಆತನ ಹೆಸರು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದೂ ಆತನ ಮೂಲ ಬಹಿರಂಗಗೊಂಡಿತ್ತು.ಈತನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಮಾಡಿದೆ.