
ಉಡುಪಿ: ಅಪಪ್ರಚಾರಗಳ ನಡುವೆಯೂ ಗ್ಯಾರಂಟಿ ಯೋಜನೆಗಳಿಗೆ ಯಶಸ್ಸು- ವಿನಯಕುಮಾರ್ ಸೊರಕೆ
12/08/2025 12:27 PM
ಉಡುಪಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ಮಹಿಳೆಯರ ಸಬಲೀಕರಣ ಆಗಿದೆ. ರಾಜ್ಯದ ಆರ್ಥಿಕತೆಗೆ ಇದು ಉತ್ತೇಜನ ನೀಡಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಉಡುಪಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ವಿರೋಧ ಪಕ್ಷದವರು ಬಿಟ್ಟಿ ಭಾಗ್ಯ ಎಂದು ಅಪಪ್ರಚಾರ ಮಾಡಿದರು. ಆದರೆ ಅವರ ಅಪಪ್ರಚಾರದ ನಡುವೆಯೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಯಶಸ್ಸು ಕಂಡಿವೆ. ವಿಶೇಷವಾಗಿ ರಾಜ್ಯದ ಮಹಿಳೆಯರು ಇದರಿಂದ ಸ್ವಾವಲಂಬಿಗಳಾಗಿ ಬದುಕುವಂತಾಗಿದೆ .ಎಲ್ಲಾ ಅಪಪ್ರಚಾರಗಳನ್ನೂ ಮೀರಿ ಪಂಚ ಗ್ಯಾರಂಟಿಗಳು ಯಶಸ್ಸನ್ನು ತಂದು ಕೊಟ್ಟಿವೆ ಎಂದು ವಿನಯ್ ಕುಮಾರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸಹಿತ ನಾಯಕರು ಉಪಸ್ಥಿತರಿದ್ದರು.