
ಕಿನ್ನಿಮೂಲ್ಕಿ ಸಾರ್ವಜನಿಕ ಗಣೇಶೋತ್ಸವದಲ್ಲಿ ಇಂದು ಡಿಕೆಶಿ ಭಾಗಿ
30/08/2025 02:45 AM
ಉಡುಪಿ: ಕನ್ನರ್ಪಾಡಿ-ಕಿನ್ನಿಮೂಲ್ಕಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ 20ನೇ ವರ್ಷದ ಗಣೇಶೋತ್ಸವ ಆಚರಣೆ ಪ್ರಯುಕ್ತ ಆ. 30ರ ಸಂಜೆ 6.30ಕ್ಕೆ ಜರಗುವ ಧಾರ್ಮಿಕ ಸಭೆಯಲ್ಲಿ ಉಪ ಮುಖ್ಯಮಂತ್ರಿ ಶಿವಕುಮಾರ್ ಭಾಗವಹಿಸಲಿದ್ದಾರೆ.
ಅನಂತರ ಅವರು ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಮಿತಿ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ತಿಳಿಸಿದ್ದಾರೆ.