
ಉಡುಪಿ: ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಿಟಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗೆ ಮನವಿ
13/08/2025 03:08 PM
ಉಡುಪಿ: ಉಡುಪಿ ರೈಲ್ವೆ ಯಾತ್ರಿ ಸಂಘದ ವತಿಯಿಂದ ಅಧ್ಯಕ್ಷ ಧೀರಜ್ ಶಾಂತಿಯವರ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯಲ್ಲಿ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರನ್ನು ಅಭಿನಂದಿಸಲಾಯಿತು.ಈ ವೇಳೆ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಿಟಿ ಬಸ್ ಸಂಚಾರ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ ಅವರಿಗೆ ಮನವಿ ನೀಡಲಾಯಿತು. ಸಂಘದ ಉಪಾಧ್ಯಕ್ಷ ಮಧುಸೂದನ್ ಹೇರೂರು, ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಕೋಶಾಧಿಕಾರಿ ಅಜಿತ್ ಕುಮಾರ್ ಪೈ, ನಿರ್ದೇಶಕರುಗಳಾದ ಜಾನ್ ರೆಬೆಲ್ಲೊ, ಶ್ರೀನಿವಾಸ್ ಶೆಟ್ಟಿ ತೊನ್ಸೆ, ಪ್ಲಾಸಿಡ್ ಹಾಜರಿದ್ದರು.