
ಉಡುಪಿ: ಅನಾಮಿಕನ ಬಂಧನ ,ಎಸ್ ಐಟಿ ತನಿಖೆ ಸ್ಥಿತಿಗತಿ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ
ಉಡುಪಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಶವ ಉತ್ಖನನದ ಪ್ತಧಾನ ದೂರುದಾರ , ಅನಾಮಿಕ ವ್ಯಕ್ತಿಯನ್ನು ಇಂದು ಬಂಧಿಸಲಾಗಿದ್ದು,ಉಡುಪಿಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಇದನ್ನು ದೃಢಪಡಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು ,ಅನಾಮಿಕನ ಬಂಧನ ಆಗಿರುವುದು ನಿಜ.ಆತ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ.ತನಿಖೆ ನಡೆಯುವುದರಿಂದ ಯಾವುದೇ ಮಾಹಿತಿ ನೀಡಲುಸಾಧ್ಯವಿಲ್ಲ. ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ.ಹೆಚ್ಚಿನ ಮಾಹಿತಿ ಎಸ್ಐಟಿ ಅದರಿಂದ ಪಡೆಯುತ್ತೇನೆ ಎಂದು ಹೇಳಿದರು.
ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದ ಗೃಹಸಚಿವರು ,ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು.ಎಸ್ ಐ ಟಿ ತನಿಖೆ ಇಲ್ಲಿಗೆ ಮುಕ್ತಾಯ ಆಗುತ್ತೆ ಎಂದು ಹೇಳಲು ಬರುವುದಿಲ್ಲ.
ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ.ತನಿಖೆಯ ವರದಿಗಳು ಬರುವವರೆಗೆ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ.ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್ಐಟಿ ತನಿಖೆಗೆ ಅಡ್ಡಿಯಾಗುತ್ತದೆ.ಹಾಗಾಗಿ ಯಾವುದನ್ನೂ ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.ಬಿಜೆಪಿಯವರು ಅನೇಕ ಆರೋಪಗಳನ್ನು ಮಾಡಬಹುದು,ಬೇರೆ ಬೇರೆ ರೀತಿಯ ಹೇಳಿಕೆಗಳು ಬರಬಹುದು.ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ.ಎಸ್ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲೂ ಆಗಲ್ಲ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪರಮೇಶ್ವರ್ , 23ರಲ್ಲಿ ಶಾಸಕ ಹರೀಶ್ ಪೂಂಜ ಮುಖ್ಯಮಂತ್ರಿ ಕೊಲೆ ಮಾಡಿದ್ದಾರೆ ಎಂಬ ಅವರ ಹೇಳಿಕೆಗೆ ಅವರು ತಡೆಯಾಜ್ಞೆ ತೆಗೆದುಕೊಂಡಿದ್ದಾರೆ.ತಡೆಯಾಜ್ಞೆ ತೆರವಾದರೆ ಕ್ರಮ ತೆಗೆದುಕೊಳ್ಳಬಹುದು ಎಂದರು.
ಅನಾಮಿಕ ವ್ಯಕ್ತಿಯನ್ನು ಯಾವ ಸೆಕ್ಷನ್ ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್ಐಟಿಯವರಿಗೆ ಗೊತ್ತು.ದೂರುದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು. ಎಸ್ ಐ ಟಿ ಹೇಳಿದ್ದನ್ನು ಎಲ್ಲವೂ ಹೇಳಲು ಸಾಧ್ಯವಿಲ್ಲ.ಆತ ಅರೆಸ್ಟ್ ಆಗಿರುವುದನ್ನು ಮಾತ್ರ ನಾನು ಹೇಳಬಲ್ಲೆ ಎಂದು ಉತ್ತರಿಸಿದರು.