ಉಡುಪಿ: ಸೆ. 30 ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೃಷ್ಣಮಠಕ್ಕೆ

ಉಡುಪಿ: ಸೆ. 30 ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೃಷ್ಣಮಠಕ್ಕೆ

 


ಉಡುಪಿ: ಉಪ ಮುಖ್ಯಮಂತ್ರಿ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಸೆ. 30 ರಂದು ( ಶನಿವಾರ ) ಉಡುಪಿಗೆ ಆಗಮಿಸಲಿದ್ದಾರೆ. ಕೃಷ್ಣಮಠಕ್ಕೆ ಆಗಮಿಸುವ ಅವರು, ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ 64 ರ  ಜನ್ಮನಕ್ಷತ್ಯೋತ್ಸವ  ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 .15ಕ್ಕೆ ಶ್ರೀಕ್ರಷ್ಣನ ಸನ್ನಿಧಾನಕ್ಕೆ  ಆಗಮಿಸಿ ಸಮಾರಂಭದಲ್ಲಿ ಭಾಗವಹಿಸಿದ ನಂತರ ರಾತ್ರಿ 8 ಗಂಟೆಗೆ ಉಡುಪಿಯಿಂದ ರಸ್ತೆಯ ಮೂಲಕ ಮಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article