
ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ವಿಧಿವಶ
24/09/2025 09:41 AM
ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.