
ಬೆಳ್ತಂಗಡಿ: ಸೌಜನ್ಯ ಅ*ಚಾರ - ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಕೆಯ ಮಾವ ವಿಟ್ಠಲ್ ಗೌಡ- ಸ್ನೇಹಮಯಿ ಕೃಷ್ಣ ಗಂಭೀರ ಆರೋಪ
08/09/2025 12:45 PM
ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ಸೋಮವಾರ (ಸೆ.8) ಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012 ಆ.9 ರಂದು ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಆಕೆಯ ಮಾವ ವಿಟ್ಠಲ್ ಗೌಡ. ಹೀಗಾಗಿ ವಿಟ್ಠಲ್ ಗೌಡನನ್ನು ಮಂಪರು ಪರೀಕ್ಷೆ ಮಾಡಬೇಕೆಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈ ಪ್ರಕರಣ ಸಂಬಂಧ ಪೂರಕ ಸಾಕ್ಷಿಗಳನ್ನು ಸಂಗ್ರಹಿಸಿದ್ದು, ಇದನ್ನು ದಕ್ಷಿಣ ಕನ್ನಡ ಎಸ್ಪಿಗೆ ಹೋಗಿ ದೂರು ಸಲ್ಲಿಸುವುದಾಗಿ ಮಾಧ್ಯಮಗಳಿಗೆ ಸ್ನೇಹಮಯಿ ಕೃಷ್ಣ ಮಾಹಿತಿ ನೀಡಿದ್ದಾರೆ.