ಮದ್ದೂರು: ಕರ್ನಾಟಕ ಹಿಂದೂ ಪಾರ್ಟಿ ಕಟ್ಟುತ್ತೇನೆ- ಹೊಸ ಪಕ್ಷದ ಚಿನ್ಹೆ JCB- ಮದ್ದೂರಿನಲ್ಲಿ ಯತ್ನಾಳ್ ಘೋಷಣೆ

ಮದ್ದೂರು: ಕರ್ನಾಟಕ ಹಿಂದೂ ಪಾರ್ಟಿ ಕಟ್ಟುತ್ತೇನೆ- ಹೊಸ ಪಕ್ಷದ ಚಿನ್ಹೆ JCB- ಮದ್ದೂರಿನಲ್ಲಿ ಯತ್ನಾಳ್ ಘೋಷಣೆ

 


ಮದ್ದೂರು: ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ  ಘಟನೆ ನಡೆದ ಬಳಿಕ ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಬೂದಿಮುಚ್ಚಿದ ಕೆಂಡದಂತಿದೆ. ಈ ನಡುವೆಯೇ ಇಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮದ್ದೂರಿನ ರಾಮಮಂದಿರ ಬಳಿ ಭಾಷಣ ಮಾಡಿದ ಯತ್ನಾಳ್​, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ಕರ್ನಾಟಕ ಹಿಂದೂ ಪಾರ್ಟಿ ಕಟ್ಟುತ್ತೇನೆ ಎಂದು ಹೇಳಿದರು.

ರಾಜ್ಯ ಬಿಜೆಪಿಯವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ‌. ಬಿಜೆಪಿಯವರು ಹೊಂದಾಣಿಕೆ ರಾಜಕಾರಣಿಗಳನ್ನು ಕೈಬಿಡಲಿ. ಹೊಂದಾಣಿಕೆ ಮಾಡುವವರನ್ನು ಕೈಬಿಟ್ಟು ನಮ್ಮನ್ನ ಸೇರಿಸಿಕೊಂಡ್ರೆ ಸರಿ. ಇಲ್ಲ‌ದಿದ್ದರೆ ನಾನು ಹೊಸ‌ ಹಿಂದೂ ಪಕ್ಷವನ್ನು ಕಟ್ಟುತ್ತೇನೆ ಎಂದು ಬಿಜೆಪಿ ಹೈಕಮಾಂಡ್​​ ಗೆ ಸಂದೇಶ ರವಾನಿಸಿದ ಯತ್ನಾಳ್, ಮುಂದಿನ ಬಾರಿ ಮಂಡ್ಯ, ಮೈಸೂರಿಗೆ ಪ್ರವಾಸ ಮಾಡುತ್ತೇನೆ ಎಂದರು.

ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರ ಮಾತಾಡುತ್ತೇವೆ. ನಾವು ಪ್ರತಾಪ್ ಸಿಂಹ ಒಂದಾಗಿ ಹೊಸ ಸರ್ಕಾರ ತರುತ್ತೇವೆ. ಬಿಜೆಪಿಯವರು ನನ್ನ ಗೌರವಯುತವಾಗಿ ತೆಗೆದುಕೊಳ್ಳದಿದ್ರೆ ಕರ್ನಾಟಕ ಹಿಂದೂ ಪಾರ್ಟಿ ಕಟ್ಟುತ್ತೇನೆ. ಹೊಸ ಪಕ್ಷದ ಗುರುತು JCB ಎಂದು ಘೋಷಿಸಿದ ಯತ್ನಾಳ್, ಸಿಎಂ ಸಿದ್ದರಾಮಯ್ಯ ಸರ್ಕಾರ ಔರಂಗಜೇಬ್ ಸರ್ಕಾರ. ಈ ಸರ್ಕಾರದಲ್ಲಿ ಸಾಬರಿಗೆ ಗುತ್ತಿಗೆಯಲ್ಲೂ ಮೀಸಲಾತಿ ಕೊಟ್ಟಿದೆ. ವಕ್ಫ್ ದೇಣಿಗೆ ಕೊಡುತ್ತಿರುವ ಮುಸ್ಲಿಂ ಸರ್ಕಾರ ಬೇಕಾ? ಕರ್ನಾಟಕಕ್ಕೆ ಒಬ್ಬ ಬುಲ್ಡೋಜರ್ ಬಾಬ ಬೇಕೋ ಹೇಳಿ. ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಲು ಬಿಡಲ್ಲ. ಇವರು ಕಟ್ಟಿದ ಮಸೀದಿಗಳು ಅಕ್ರಮ. ಇನ್ಮುಂದೆ ಕರ್ನಾಟಕದಲ್ಲಿ ಇದು ನಡೆಯಲ್ಲ. ನನಗೆ ಆಶೀರ್ವಾದ ಮಾಡಿದ್ರೆ ರಾಜ್ಯಾದ್ಯಂತ  ಅಕ್ರಮ ಮಸೀದಿ ತೆರವುಗೊಳಿಸುತ್ತೇನೆ ಎಂದು ಹೇಳಿದರು.

Ads on article

Advertise in articles 1

advertising articles 2

Advertise under the article