
ಉಡುಪಿ: ಡ್ರಗ್ಸ್ - ಗಾಂಜಾ ವಿರುದ್ದ ಪೊಲೀಸರ ಕಟ್ಟುನಿಟ್ಟಿನ ಕ್ರಮ- 15 ದಿನದಲ್ಲಿ 23 ಪ್ರಕರಣ, 28 ಅಪರಾಧಿಗಳ ವಿರುದ್ಧ ಕ್ರಮ
20/09/2025 01:05 PM
ಉಡುಪಿ: ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಗಾಂಜಾ ಸೇವನೆ ಪ್ರಕರಣಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 23 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಒಟ್ಟು 28 ಅಪರಾಧಿಗಳ ವಿರುಧ್ದ ಕ್ರಮ ಕೈಗೊಳ್ಳಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಒಟ್ಟು 14 ಪ್ರಕರಣ ದಾಖಲಾಗಿದ್ದು, 16 ಆರೋಪಿಗಳು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದು, 4 ಆರೋಪಿಗಳು, ಕುಂದಾಪುರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದ್ದು, 2 ಆರೋಪಿಗಳು, ಹೆಬ್ರಿ, ಕಾಪು, ಕಾರ್ಕಳ ಗ್ರಾಮಾಂತರ, ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದು, ಒಟ್ಟು 6 ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿರುತ್ತದೆ. ಉಡುಪಿ ಜಿಲ್ಲೆಯಲ್ಲಿ ಗಾಂಜಾ ಸೇವನೆ ಮತ್ತು ಸರಬರಾಜು ಪ್ರಕರಣಗಳ ವಿರುದ್ದ ಕಟ್ಟುನಿಟ್ಟಿನ ಕ್ರಮವನ್ನು ನಿರಂತರ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.