ಉಡುಪಿ: ಜ್ಯುವೆಲರಿ ವರ್ಕ್ ಶಾಪ್ ಗೆ ನುಗ್ಗಿದ ಕಳ್ಳರು; 6 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ಕಳವು

ಉಡುಪಿ: ಜ್ಯುವೆಲರಿ ವರ್ಕ್ ಶಾಪ್ ಗೆ ನುಗ್ಗಿದ ಕಳ್ಳರು; 6 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ಕಳವು

 


ಉಡುಪಿ: ಉಡುಪಿ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ  ತಡರಾತ್ರಿ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಚಿನ್ನ ಮತ್ತು ಬೆಳ್ಳಿ ಕರಗಿಸುವ 'ವೈಭವ್ ರಿಫೈನರ್' ಎಂಬ ಅಂಗಡಿಯ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು ಡ್ರಾವರ್‌ನ ನಕಲಿ ಬೀಗದಿಂದ 600 ಗ್ರಾಂ ತೂಕದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ಮತ್ತು ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಅಂಗಡಿಯಲ್ಲಿ ದುಡಿಯುತ್ತಿದ್ದ ಕಾರ್ಮಿಕರೇ ಈ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿರುವ ಸಂದೇಹ ವ್ಯಕ್ತವಾಗಿದ್ದು, ಪೊಲೀಸರು ಅವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.

ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಭೇಟಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article