ಉಡುಪಿ: ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ' - ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ' - ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ

 


ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡ ಜಿಎಸ್ಟಿ ಸುಧಾರಣೆಯ ನಿರ್ಣಯ ವಿಶ್ವದಲ್ಲೇ ಅತ್ಯಂತ ತ್ವರಿತ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಪ್ರಗತಿಗೆ ಇನ್ನಷ್ಟು ವೇಗ ನೀಡುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೇರಿಕಾ ಭಾರತದ ಅಭಿವೃದ್ಧಿಯ ನಾಗಾಲೋಟವನ್ನು ಸಹಿಸದೆ ಭಾರತಕ್ಜೆ ಗರಿಷ್ಠ 50% ತೆರಿಗೆಯನ್ನು ವಿಧಿಸುವ ಮೂಲಕ ದೇಶದ ಅಭಿವೃದ್ಧಿಯ ವೇಗವನ್ನು ತಡೆಯಲು ಯತ್ನಿಸಿದರೂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅದಕ್ಕೆ ತಕ್ಕುದಾದ ಸಕಾಲಿಕ ನಿರ್ಣಯವನ್ನು ತೆಗೆದುಕೊಂಡಿದೆ. ಆ ಮುಖೇನ ದೇಶದ ರೈತರ, ಯುವ ಜನರ ಮತ್ತು ಸಣ್ಣ ಉದ್ದಿಮೆದಾರರ ಹಿತ ರಕ್ಷಣೆಗೆ ಮುಂದಾಗಿದೆ. ಜಿಎಸ್ಟಿ ದರ ಕಡಿತ ಗೊಳಿಸುವ ಮೂಲಕ ಸಾಮಾನ್ಯ ಜನರ, ಬಡವರ ಮತ್ತು ಮಧ್ಯಮ ವರ್ಗದವರ ಕೈಯಲ್ಲಿ ಹಣ ಉಳಿಯುವಂತೆ ಮಾಡಿ ಹೆಚ್ಚಿನ ಖರೀದಿಗೆ ಪ್ರೋತ್ಸಾಹಿಸಿ, ವಿಕಸಿತ ಭಾರತಕ್ಕೆ ಮುನ್ನುಡಿ ಬರೆದಿದೆ.

ಸುಮಾರು 390ಕ್ಕಿಂತಲೂ ಹೆಚ್ಚಿನ ವಸ್ತುಗಳ ತೆರಿಗೆಯನ್ನು ಕಡಿತಗೊಳಿಸಿ ಗರಿಷ್ಠ ವಿನಾಯಿತಿಯನ್ನು ನೀಡಿರುವ ಕೇಂದ್ರ ಸರಕಾರದ ಈ ಐತಿಹಾಸಿಕ ನಿರ್ಣಯವನ್ನು ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮದಿಂದ ಸ್ವಾಗತಿಸುತ್ತದೆ.

ಜಿಎಸ್ಟಿ ದರ ಕಡಿತ ದೇಶವಾಸಿಗಳಿಗೆ ನವರಾತ್ರಿ, ದೀಪಾವಳಿ ಸಹಿತ ಇತರ ಹಬ್ಬಗಳನ್ನು ಸಂಭ್ರಮಿಸಲು ದೊರೆತ ಬೋನಸ್ ನಂತಿದೆ ಎಂದು ಕುತ್ಯಾರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article