
ಉಡುಪಿ: ಓಟ್ ಚೋರ್ ,ಗದ್ದಿ ಚೋಡ್ ಅಭಿಯಾನಕ್ಕೆ ಉಡುಪಿ ಕಾಂಗ್ರೆಸ್ ಬೆಂಬಲ- ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ
ಉಡುಪಿ: ಕೇಂದ್ರ ಸರ್ಕಾರದ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರ್ ಗದ್ದಿ ಚೋಡ್ ಅಭಿಯಾನ ಆರಂಭಿಸಿದ್ದು ಈ ಅಭಿಯಾನಕ್ಕೆ ರಾಷ್ಟ್ರ ಮತ್ತು ರಾಜ್ಯದ ಎಲ್ಲೆಡೆ ಬೆಂಬಲ ವ್ಯಕ್ತವಾಗಿದೆ ಎಂದು ಉಡುಪಿಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮತಗಳ್ಳತನ ಮಾಡಿದವರು ಜಾಗ ಖಾಲಿ ಮಾಡಿ ಅಭಿಯಾನವನ್ನು ರಾಹುಲ್ ಗಾಂಧಿಯವರು ನಡೆಸುತ್ತಿದ್ದಾರೆ.
ರಾಜ್ಯ ಮತ್ತು ದೇಶದಲ್ಲಿ ಆಗಿರುವ ಮತಗಳ್ಳತನವನ್ನು ಚುನಾವಣಾ ಆಯೋಗದ ಮುಂದೆ ಇಡುವ ಅಭಿಯಾನ ಇದಾಗಿದೆ.ರಾಹುಲ್ ಗಾಂಧಿ ಪುರಾವೆ ಸಮೇತ ಹಗರಣ ಬಿಚ್ಚಿಟ್ಟಿದ್ದಾರೆ.ಮತದಾನದ ಹಕ್ಕಿನ ಕಳ್ಳತನ ನಿರಂತರವಾಗಿ ಆಗುತ್ತಿದೆ.
ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ತನಿಖೆ ನಡೆಸಬೇಕು.ಉಡುಪಿ ಕಾಂಗ್ರೆಸ್ ನಿಂದಲೂ ಸಹಿ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಪ್ರತಿ ಬೂತ್ ಮಟ್ಟದಲ್ಲಿ ಸಹಿ ಸಂಗ್ರಹ ಮಾಡಿ ಮಾಡಲಿದ್ದೇವೆ.ಒಂದು ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸಿ ರಾಹುಲ್ ಗಾಂಧಿಯವರಿಗೆ ಬೆಂಬಲ ನೀಡಲಿದ್ದೇವೆ ಎಂದು ಐವನ್ ಡಿಸೋಜಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಜಯಪ್ರಕಾಶ್ ಹೆಗ್ಡೆ, ಎಂಎ ಗಫೂರ್, ದಿನೇಶ್ ಹೆಗ್ಡೆ ಮೊಳಹಳ್ಳಿ ,ಪ್ರಸಾದ್ ಕಾಂಚನ್, ಮುನಿಯಾ ಉದಯ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.