ಉಡುಪಿ: ಸಾಹಿತಿ ಎಸ್.ಎಲ್.ಭೈರಪ್ಪನವರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ: ಸಾಹಿತಿ ಎಸ್.ಎಲ್.ಭೈರಪ್ಪನವರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

 



ಉಡುಪಿ: ಸಾರಸ್ವತ ಲೋಕಕ್ಕೆ ಬಹಳಷ್ಟು ಕೊಡುಗೆ ನೀಡಿದ್ದ, ಕನ್ನಡದ ಶ್ರೇಷ್ಠ ಕಾದಂಬರಿಕಾರರು ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ.ಎಸ್.ಎಲ್. ಭೈರಪ್ಪನವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತಾಪ‌ ವ್ಯಕ್ತಪಡಿಸಿದ್ದಾರೆ. 

ಪ್ರತಿಷ್ಠಿತ ಸರಸ್ವತಿ‌ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾಗಿದ್ದ ಎಸ್.ಎಲ್. ಭೈರಪ್ಪನವರ ನಿಧನದ ಸುದ್ಧಿ ತಿಳಿದು ಮನಸ್ಸಿಗೆ ನೋವಾಯಿತು.ಅಪಾರ ಅಭಿಮಾನಿಗಳನ್ನು ಹೊಂದಿದ್ದ ಬೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ ಎಂದರು. 

ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article