
ಬ್ರಹ್ಮಾವರ: ಚೂರಿ ಇರಿತಕ್ಕೊಳಪಟ್ಟ ಯುವತಿ ಮೃತ್ಯು- ಕೊಲೆಗೈದ ಯುವಕನೂ ಆತ್ಮಹತ್ಯೆ
ಬ್ರಹ್ಮಾವರ: ಕೊಕ್ಕರ್ಣೆಯಲ್ಲಿ ಪ್ರೇಮಿಯಿಂದ ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಮದುವೆ ನಿರಾಕರಿಸಿದ ಕಾರಣಕ್ಕಾಗಿ ಆರೋಪಿ ಕೊಕ್ಕರ್ಣೆ ಚೆಗರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ, ತನ್ನ ನೆರೆಮನೆಯ ಪ್ರೇಯಸಿ ರಕ್ಷಿತಾ ಪೂಜಾರಿ (24) ಎಂಬಾಕೆಯನ್ನು ಚೂರಿಯಿಂದ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡ ರಕ್ಷಿತಾ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅಕ್ಷತಾ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ಯುವಕ ಬಾವಿಗೆ ಹಾರಿ ಆತ್ಮಹತ್ಯೆ
ಇದೇವೇಳೆ ಯುವತಿಗೆ ಚಾಕುವಿನಿಂದ ಇರಿದು ಕೊಲೆಗೈದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.ಕೊಲೆ ಆರೋಪಿ ಕಾರ್ತಿಕ್ ಪೂಜಾರಿ ಮೃತದೇಹ ಅಲ್ಲೇ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಈತ ಕೊಲೆ ಮಾಡಿದ ಬಳಿಕ ಪರಾರಿಯಾಗಿ ಅಲ್ಲೇ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.