
ಉಡುಪಿ: ಉಪವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಸಂಘದಿಂದ ಬೃಹತ್ ರಕ್ತದಾನ ಶಿಬಿರ
ಉಡುಪಿ: ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಸಂಘ ಇವರ ಜಂಟಿ ಆಶ್ರಯದಲ್ಲಿ ಅರಣ್ಯ ಹುತಾತ್ಮರ ದಿನದ ಪ್ರಯುಕ್ತ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟಿಸಿದರು. ಉಪವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ರಾದ ನಾಗೇಶ್ ಬಿಲ್ಲವ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ .ಕೆ. ,ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು , ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಂಪಾರು ದಿನಕರ ಶೆಟ್ಟಿ, ಜಿಲ್ಲಾ ರಕ್ತನಿಧಿ ಕೇಂದ್ರದ ಡಾ ವೀಣಾ ಶೆಟ್ಟಿ, ಗಸ್ತು ಅರಣ್ಯ ಪಾಲಕ ಸಂಘದ ಗೌರವಾಧ್ಯಕ್ಷ ದೇವರಾಜ ಪಾಣ , IMA ಸಂಘದ ಅಧ್ಯಕ್ಷರಾದ ರೋಟರಿಯನ್ ಡಾ|ಕಲ್ಯಾ ಸುರೇಶ್ ಶೆಣೈ, ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ ಶ್ರೀಧರ್ , ಕುಂದಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ , ಸಿದ್ದಾಪುರ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ ಜಿ. ಡಿ. , ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿ ಸಂಘದ ಕಾರ್ಯದರ್ಶಿ ಕಿರಣ್ ಕುಮಾರ್ ಉಪಸ್ಥಿತರಿದ್ದರು.ಗಸ್ತು ಅರಣ್ಯ ಪಾಲಕರ ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಉಪವಲಯ ಅರಣ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಸ್ವಾಗತಿಸಿದರು. ಗಸ್ತು ಅರಣ್ಯ ಪಾಲಕರ ಸಂಘದ ಖಜಾಂಚಿ ಧನ್ಯವಾದ ಸಮರ್ಪಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.
ಅರಣ್ಯ ರಕ್ಷಣೆಯಲ್ಲಿ ಮಡಿದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು. ಒಟ್ಟು 155 ಯೂನಿಟ್ ರಕ್ತ ಸಂಗ್ರಹಿಸಿ ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.