ಧರ್ಮಸ್ಥಳ: ಉದಯ್ ಕುಮಾರ್ ಜೈನ್, ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ಬುಲಾವ್‌ !

ಧರ್ಮಸ್ಥಳ: ಉದಯ್ ಕುಮಾರ್ ಜೈನ್, ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ಬುಲಾವ್‌ !

 


ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ  ತಿರುವು ಸಿಕ್ಕಿದ್ದು ,ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್‌ ಪಡೆದವರಿಗೆ ವಿಶೇಷ ತನಿಖಾ ತಂಡ ಬುಲಾವ್‌ ನೀಡಿರುವುದು ಇದಕ್ಕೆ ಕಾರಣವಾಗಿದೆ.

ಕರ್ನಾಟಕ ಪೊಲೀಸ್‌, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ ಕ್ಲೀನ್‌ಚಿಟ್‌ ಪಡೆದುಕೊಂಡಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ಬುಲಾವ್‌ ನೀಡಿದೆ. ಹೀಗಾಗಿ ಆರೋಪ ಹೊತ್ತ ಉದಯ್‌ ಕುಮಾರ್ ಜೈನ್ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

ಸೌಜನ್ಯಾ ಕೊಲೆ ಪ್ರಕರಣದಲ್ಲಿ ಉದಯ್ ಜೈನ್, ಮಲ್ಲಿಕ್ ಜೈನ್ ಹಾಗೂ ಧೀರಜ್ ಕೆಲ್ಲ ಅವರ ಹೆಸರು ಕೂಡ ತಳಕು ಹಾಕಿಕೊಂಡಿತ್ತು.

'ಸೌಜನ್ಯ ಕೊಲೆ ಪ್ರಕರಣದ ಎಫ್‌ಐಆರ್ ನಲ್ಲಿ ನಮ್ಮ ಹೆಸರು ಇರಲಿಲ್ಲ. ಆದರೂ ನಮ್ಮನ್ನು ಆರೋಪಿಗಳನ್ನಾಗಿಸುವ ಷಡ್ಯಂತ್ರ ನಡೆದಿತ್ತು. ಸಿಬಿಐ ಮತ್ತು ಸಿಐಡಿ ಅಧಿಕಾರಿಗಳು ನಮ್ಮನ್ನು ವಿಚಾರಣೆಗೆ ಒಳಪಡಿಸಿದ್ದರು. ನಮ್ಮ ಮಂಪರು ಪರೀಕ್ಷೆಯನ್ನೂ ನಡೆಸಲಾಗಿತ್ತು. ಆ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ ಎಂದು ಸಾಬೀತಾಗಿತ್ತು. ಈಗ ಎಸ್ಐಟಿಯವರು ಯಾವ ಪ್ರಕರಣ ಸಂಬಂಧ ವಿಚಾರಣೆಗೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ನನ್ನಂತೆಯೇ, ಇನ್ನಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯವರು ಕರೆ ಮಾಡಿದ್ದಾರೆ. ನಾನು ಧೀರಜ್ ಕೆಲ್ಲ ಅವರಿಗೆ ಕರೆ ಮಾಡಿದ್ದೆ. ಆಗ ಅವರು ಈ ವಿಚಾರ ತಿಳಿಸಿದ್ದಾರೆ. ಎಸ್ಐಟಿಯವರು ಕರೆದಿದ್ದಾರೆ ಎಂದ ಮೇಲೆ ಅವರು ಕೂಡ ಬರಲೇಬೇಕಾಗುತ್ತದೆ ಎಂದರು.



Ads on article

Advertise in articles 1

advertising articles 2

Advertise under the article