
ಉಡುಪಿ:ಟ್ರಕ್ ನಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಾಟ- ಸೆನ್ ಪೊಲೀಸರಿಂದ ಕಾರ್ಯಾಚರಣೆ- ಗಾಂಜಾ ವಶ
11/09/2025 11:24 AM
ಉಡುಪಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿಯನ್ನು ಉಡುಪಿ ಕಿನ್ನಿಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯನ್ನು ತಡೆದ ಪೊಲೀಸರು 65 ಕೆ.ಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.