
ದಸರಾ ಉದ್ಘಾಟನೆಗೆ ಬಾನು ಮುಷ್ಕಾಕ್ ಗೆ ಆಹ್ವಾನ – ಪಿಐಎಲ್‌ಗಳನ್ನು ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಪ್ರಸ್ತುತ ವರ್ಷದ ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಮಾಜಿ ಸಂಸದ ಪ್ರತಾಪ ಸಿಂಹ, ಬೆಂಗಳೂರಿನ ಉದ್ಯಮಿ ಟಿ. ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷೆ ಆರ್. ಸೌಮ್ಯಾ ಅವರು ಪ್ರತ್ಯೇಕವಾಗಿ ಮೂರು ಪಿಐಎಲ್ ಅರ್ಜಿಗಳನ್ನು ಸಲ್ಲಿಸಿದ್ದರು.ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ, ಕೆಲಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ, ಅರ್ಜಿದಾರರ ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲ ಎಂದು ಸ್ಪಷ್ಟಪಡಿಸಿ ಅರ್ಜಿಗಳನ್ನು ವಜಾಗೊಳಿಸಿದೆ. ಜೊತೆಗೆ, ಈ ಸಂಬಂಧ ವಿಸ್ತ್ರತ ಆದೇಶವನ್ನು ಬಳಿಕ ಪ್ರಕಟಿಸುವುದಾಗಿ ನ್ಯಾಯಪೀಠ ತಿಳಿಸಿದೆ.