
ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಆರ್ಥಿಕ ಸಮೀಕ್ಷೆಗೆ (ಜಾತಿ ಗಣತಿ) ತಡೆ ನೀಡಲು ಹೈಕೋರ್ಟ್ ನಕಾರ !
ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಆರ್ಥಿಕ ಸಮೀಕ್ಷೆಗೆ (ಜಾತಿ ಗಣತಿ) ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಜತೆಗೆ ಹಲವು ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ನೀಡಿದೆ.
ರಾಜ್ಯದಲ್ಲಿ ನಡೆಸುತ್ತಿರುವ ಜಾತಿ ಗಣತಿಗೆ (ಸಮೀಕ್ಷೆಗೆ) ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸೇರಿದಂತೆ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಕಳೆದ 3 ದಿನಗಳಿಂದ ನಡೆಸುತ್ತಿತ್ತು. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠವು ಗುರುವಾರ ಮಧ್ಯಂತರ ಆದೇಶ ನೀಡಿದೆ.
ಷರತ್ತುಗಳು:
ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ ,ಜನರು ಮಾಹಿತಿ ನೀಡಬೇಕು ಎಂದು ಸಮೀಕ್ಷೆ ನಡೆಸುವವರು ಒತ್ತಾಯ ಮಾಡುವಂತಿಲ್ಲ,ಸಂಗ್ರಹಿಸಿದ ದತ್ತಾಂಶವನ್ನು ಹಿಂದುಳಿದ ವರ್ಗಕ್ಕೆ ಆಯೋಗಕ್ಕೆ ಹೊರತುಪಡಿಸಿ ಯಾರಿಗೂ ದೊರೆಯದಂತೆ ಗೌಪ್ಯವಾಗಿ ಸಂಗ್ರಹಿಸಿಡಬೇಕು.ಈ ಷರತ್ತುಗಳಿಗೆ ಬದ್ದ ಎಂದು ಹಿಂದುಳಿದ ಆಯೋಗವು ಅಫಿಡವಿಟ್ ಸಲ್ಲಿಸಬೇಕು. ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ/ಸ್ವಯಂಪ್ರೇರಿತ ಎಂಬುದರ ಸಂಬಂಧ ಸರ್ಕಾರವು ಸಾರ್ವಜನಿಕವಾಗಿ ಪ್ರಕಟಣೆ ನೀಡಬೇಕು.