
ಮಣಿಪಾಲ: ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಪೋಟ- ಮಹಿಳೆಯ ರಕ್ಷಣೆ
03/09/2025 12:33 PM
ಮಣಿಪಾಲ: ಅಪಾರ್ಟ್ ಮೆಂಟ್ ವೊಂದರ ಫ್ಲ್ಯಾಟ್ ನಲ್ಲಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಬುಧವಾರ ಮಧ್ಯಾಹ್ನ ಮಣಿಪಾಲದಲ್ಲಿ ಸಂಭವಿಸಿದೆ.
ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿ, ಫ್ಲ್ಯಾಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಅಂದಾಜು 50 ಸಾವಿರ ರೂ. ನಷ್ಟ ಸಂಭವಿಸಿದ್ದಾಗಿ ತಿಳಿದುಬಂದಿದೆ.