
ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ನಿಂದ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ದೇಣಿಗೆ
06/09/2025 03:33 PM
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸ್ಥಾಪಿಸಲಾದ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ವತಿಯಿಂದ ದೇಣಿಗೆ ನೀಡಲಾಯಿತು.
ಉಡುಪಿ ಕೊಚ್ಚಿನ್ ಶಿಪ್‌ಯಾರ್ಡನ ಮುಖ್ಯಕಾರ್ಯನಿರ್ವಹಣಾಧಿ ಕಾರಿ ಹರಿಕುಮಾರ್ ದೇಣಿಗೆಯನ್ನು ಸಂಘಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕಾರ್ಯಕಾರಿ ಸಮಿತಿ ಸದಸ್ಯ ಮೈಕಲ್ ರೋಡ್ರಿಗಸ್ ಉಪಸ್ಥಿತರಿದ್ದರು