
ದೆಹಲಿ: ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗದಿಂದ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ- ರಾಜ್ಯದ ಬೆಳವಣಿಗೆ ಬಗ್ಗೆ ಚರ್ಚೆ
09/09/2025 03:53 PM
ನವದೆಹಲಿ: ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದ ಬಿಜೆಪಿ ನಿಯೋಗವು ನವದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಕುಸಿದು ಬಿದ್ದಿರುವ ಕಾನೂನು ಸುವ್ಯವಸ್ಥೆ, ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರದ ಷಡ್ಯಂತ್ರ, ಗಣೇಶ ವಿಸರ್ಜನೆ ವೇಳೆ ನಡೆದ ದುರ್ಘಟನೆ, ಸೇರಿದಂತೆ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಮಾಹಿತಿ ನೀಡಿತು.
ನಿಯೋಗದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಎಸ್. ಆರ್. ವಿಶ್ವನಾಥ್, ಹರೀಶ್ ಪೂಂಜ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಪ್ರಮುಖರು ಉಪಸ್ಥಿತರಿದ್ದರು.