ಉಡುಪಿ: ಇಂದು ಉತ್ತಮ ಮಳೆ ಸಾಧ್ಯತೆ- ಆರೆಂಜ್ ಅಲರ್ಟ್ ಘೋಷಣೆ

File photo

ಉಡುಪಿ: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.

ಸೋಮವಾರ ಬೆಳಗ್ಗೆಯಿಂದಲೇ ಸುರಿಯುತ್ತಿದ್ದ ಮಳೆ ಮಧ್ಯಾಹ್ನದ ವರೆಗೂ ಮುಂದುವರೆದಿತ್ತು.  ಜಿಲ್ಲೆಯ ಬೈಂದೂರು, ಕುಂದಾಪುರ, ಕಾರ್ಕಳ, ಕೋಟ, ಬ್ರಹ್ಮಾವರ, ಮಲ್ಪೆ ಉಡುಪಿ, ಮಣಿಪಾಲ, ಹಿರಿಯಡ್ಕ ಹೆಬ್ರಿ, ಶಿರ್ವ, ಕಟಪಾಡಿ, ಕಾಪು, ಪಡುಬಿದ್ರಿ ಭಾಗದಲ್ಲಿಯೂ ಬೆಳಗ್ಗಿನಿಂದ ಸಂಜೆಯವರೆಗೆ ಉತಮ ಮಳೆ ಸುರಿದಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಮಂಗಳವಾರವೂ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರದ ಬಳಿಕ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ

ಅ. 28ರಂದು ಅರಬಿ ಸಮುದ್ರದಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ತಿಳಿಸಿದೆ.