ಕೊಪ್ಪಳ: ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.
ವೆಂಕಟೇಶ್ ಕುರುಬರ (31) ಕೋಲೆ ಆಗಿರುವ ಯುವಕ. ವೆಂಕಟೇಶ್ ಬೈಕ್‌ನಲ್ಲಿ ಗಂಗಾವತಿಯ ದೇವಿನಗರದಿಂದ ಜೂಲಾಯಿನಗರ ಮಾರ್ಗವಾಗಿ ಎಪಿಎಂಸಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬೀಳಿಸಿದ್ದಾರೆ. ಬಳಿಕ ಕಾರಿನಿಂದ ಇಳಿದು ಲಾಂಗ್‌ಗಳಿಂದ ಕೊಚ್ಚಿ ಕೊಲೆಮಾಡಿ ಪರಾರಿಯಾಗಿದ್ದಾರೆ. ವೆಂಕಟೇಶ್ ತೀವ್ರ ರಸ್ತಸ್ರಾವದಿಂದ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಈ ಸಂಬಂಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕೊಲೆ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
