ಉಡುಪಿ:ಜನಾರ್ದನ್ ಕೊಡವೂರು ಅವರಿಗೆ "ಮಹರ್ಷಿ ವಾಲ್ಮೀಕಿ ಸಮ್ಮಾನ್ 2025" ಪ್ರಶಸ್ತಿ

ಉಡುಪಿ:ಜನಾರ್ದನ್ ಕೊಡವೂರು ಅವರಿಗೆ "ಮಹರ್ಷಿ ವಾಲ್ಮೀಕಿ ಸಮ್ಮಾನ್ 2025" ಪ್ರಶಸ್ತಿ

 


ಉಡುಪಿ: ಉಡುಪಿ ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಇದೇ ಅ. 7 ರಂದು ಸಂಜೆ 4.30ಕ್ಕೆ ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜಯಂತಿ‌ ಕಾರ್ಯಕ್ರಮದಲ್ಲಿ ಕನ್ನಡ ನಾಡು - ನುಡಿ ಸಂಸ್ಕೃತಿ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜನಾರ್ದನ್ ಕೊಡವೂರು ಅವರಿಗೆ "ಮಹರ್ಷಿ ವಾಲ್ಮೀಕಿ ಸಮ್ಮಾನ್ 2025" ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಸಂಘದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದರು. 

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶಾಸಕ ಯಶ್ ಪಾಲ್ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು ಅವರು ಮಹರ್ಷಿ ವಾಲ್ಮೀಕಿ ಅವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಛಾಯಾಪತ್ರಕರ್ತ ಅಸ್ಟ್ರೋ ಮೋಹನ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಶ್ಚಂದ್ರ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಗೋಪಾಲ್ ದೇವ್ ದುರ್ಗಾ, ವೀರಪ್ಪ ಇದ್ದರು.

Ads on article

Advertise in articles 1

advertising articles 2

Advertise under the article