
ಉಡುಪಿ: ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ: 3 ಜನ ಶಿಕ್ಷಕರ ಅಮಾನತು
04/10/2025 11:34 AM
ಉಡುಪಿ: ಸುರೇಖ, ಸಹ ಶಿಕ್ಷಕರು, ರತ್ನ , ಸಹ ಶಿಕ್ಷಕರು ಹಾಗೂ ಪ್ರಭಾ ಬಿ, ಸಹ ಶಿಕ್ಷಕರು ಇವರಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಾಗಿ ನೇಮಕ ಮಾಡಿ ಆದೇಶ ಮಾಡಲಾಗಿತ್ತು. ಆದರೆ ಇವರು ನೇಮಕಾತಿ ಆದೇಶವನ್ನು ಸ್ವೀಕರಿಸಿಲ್ಲ.ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ನೇಮಕಾತಿ ಆದೇಶ ಪ್ರತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
ಈ ಮೂವರು ಶಿಕ್ಷಕಿಯರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಈವರೆಗೂ ನೋಟಿಸ್ ಗೆ ಉತ್ತರ ನೀಡಿಲ್ಲ. ಈ ಕಾರಣದಿಂದಾಗಿ ಸಮೀಕ್ಷೆದಾರರನ್ನು ಅ.4 ರಂದು ಅಮಾನತ್ತಿನಲ್ಲಿರಿಸಿ ಆದೇಶಿಸಲಾಗಿದೆ. ಇದೇ ರೀತಿ ಸಮೀಕ್ಷೆ ಕಾರ್ಯದಲ್ಲಿ ಸಮೀಕ್ಷೆದಾರರು ನಿರ್ಲಕ್ಷ್ಯ ತೋರಿದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.