![]() |
| ರಶೀದ್ ಮೊಯಿದ್ದೀನ್ |
ಕಾಪು: ಕಾಪು ತಾಲೂಕಿನ ಶಿರ್ವ ಗ್ರಾಮದಲ್ಲಿ ಲೂಯಿಸ್ ಮಥಾಯಿಸ್ ಎಂಬುವರ ಮನೆಯ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಶೀಟುಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಶೀದ್ ಮೊಯಿದ್ದೀನ್(40) ಬಂಧಿತ ಆರೋಪಿ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 69/2025, ಕಲಂ: 303(2) ಬಿಎನ್‌ಎಸ್ ರಂತೆ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಯು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ ಹಾಗೂ ಪಂಜಿಮಾರ್, ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲೂರು ಹಾಗೂ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್‌ಬೆಳ್ತೂರ್ ಎಂಬಲ್ಲಿ ಕಬ್ಬಿಣದ ಶೀಟ್‌ಗಳನ್ನು ಕಳವು ಮಾಡಿರುವುದು ಪತ್ತೆಯಾಗಿದೆ. ಈತನಿಂದ ಒಟ್ಟು 300 ಕಬ್ಬಿಣದ ಶೀಟ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮಹೀಂದ್ರ ಸುಪ್ರೋ ವಾಹನ ಸೇರಿ ಒಟ್ಟು 5,50,000 ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 30 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
