
ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ- ನವೆಂಬರ್ 6 ರಂದು ಮೊದಲ ಹಂತ, ನವೆಂಬರ್ 11 ಎರಡನೇ ಹಂತದ ಮತದಾನ
06/10/2025 11:23 AM
ಹೊಸದಿಲ್ಲಿ : ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ದಿಲ್ಲಿಯಲ್ಲಿ ಪ್ರತಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 6 ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11ರಂದು ಎರಡನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ನಂತರ ಮೊದಲ ಬಾರಿಗೆ ಬಿಹಾರ ಚುನಾವಣೆ ನಡೆಯುತ್ತಿದೆ. ಈ ಪರಿಷ್ಕರಣೆಯಲ್ಲಿ 68.5 ಲಕ್ಷ ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ ಮತ್ತು 21.5 ಲಕ್ಷ ಹೊಸ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ.
ಬಿಹಾರ ರಾಜ್ಯದಲ್ಲಿ 243 ಕ್ಷೇತ್ರಗಳಿವೆ. ಅವುಗಳಲ್ಲಿ 38 ಪರಿಶಿಷ್ಟ ಜಾತಿ ಮತ್ತು ಎರಡು ಪರಿಶಿಷ್ಟ ಪಂಗಡ ಕ್ಷೇತ್ರಗಳು ಸೇರಿವೆ. ಬಿಹಾರ ವಿಧಾನಸಭೆಯ ಅವಧಿ ನವೆಂಬರ್ 22, 2025ರಂದು ಕೊನೆಗೊಳ್ಳಲಿದೆ.