ಬೈಂದೂರು: ಅಕ್ರಮ ಕೆಂಪುಕಲ್ಲು ಗಣಿಗಾರಿಕೆ- ಆರೋಪಿ ಬಂಧನ , ಸೊತ್ತುಗಳು ವಶ


ಬೈಂದೂರು:  ಗೊಳಿಹೋಳೆ ಗ್ರಾಮದ ಬಡ್ಕಿ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮ  ಕೆಂಪುಕಲ್ಲು ಗಣಿಕಾರಿಕೆ  ನಡೆಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಈ ವೇಳೆ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಮನೋಜ ಮೊಗವೀರ(43) ಎಂಬಾತನನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಆರೋಪಿ ಸರಕಾರಿ ಜಾಗದಲ್ಲಿ ಪರವಾನಿಗೆ ಇಲ್ಲದೆ ಗಣಿಗಾರಿಕೆ ನಡೆಸುತ್ತಿದ್ದ. ಬಂಧಿತನಿಂದ  ಒಂದು ಟಿಲ್ಲರ್ , ಕೆಂಪು ಕಲ್ಲು ಮತ್ತಿತರ ಸಾಮಗ್ರಿಗಳನ್ನು ವಶಪಡೆಸಿಕೊಳ್ಳಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ : 177/2025 ಕಲಂ: 303 (2), 62 BNS &  4, 21 MMDR Act 1957ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.