ಉಡುಪಿ: ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಕಚೇರಿಯ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ಆರ್ ಟಿ ಓ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
