ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

 


ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಶುಕ್ರವಾರ ಮತ್ತು ಶನಿವಾರ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಉತ್ತರ ಒಳನಾಡಿನ ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇದೇ 9ರವರೆಗೂ ರಾಜ್ಯದ ವಿವಿಧೆಡೆ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article