ಕಾರ್ಕಳ:ಮಾರಕಾಸ್ತ್ರ ತೋರಿಸಿ ದನ ಕಳ್ಳತನ- ಮೂವರ ಬಂಧನ

ಕಾರ್ಕಳ:ಮಾರಕಾಸ್ತ್ರ ತೋರಿಸಿ ದನ ಕಳ್ಳತನ- ಮೂವರ ಬಂಧನ

 


ಅಜೆಕಾರು: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ಕೆಲವು ದಿನಗಳ ಹಿಂದೆ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಲ್ಲಿದ್ದ ದನಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ.

ಕಾರ್ಕಳ ನಲ್ಲೂರು ಗ್ರಾಮದ ಬೋರ್ಕಟ್ಟೆಯ ಮೊಹಮ್ಮದ್ ಯೂನಿಸ್ ( 31), ಮೂಡಬಿದ್ರೆ ಕಲ್ಲಬೆಟ್ಡುವಿನ ಮೊಹಮ್ಮದ್ ನಾಸೀರ್ (28), ಮೂಡಬಿದ್ರೆ ಪುತ್ತಿಗೆ ಗ್ರಾಮದ ಮಿಜಾರಿನ ಮೊಹಮ್ಮದ್ ಇಕ್ಬಾಲ್ (29) ಬಂಧಿತ ಆರೋಪಿಗಳು. ಇವರಿಂದ ಕೃತ್ಯಕ್ಕೆ ಬಳಸಿದ್ದ 2 ತಲವಾರು, ಕಾರು, ಬೋಲೆರೋ ವಾಹನ, 5 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 5,87,000ರೂ. ಎಂದು ಅಂದಾಜಿಸಲಾಗಿದೆ.

ಸೆ.28ರಂದು ರಾತ್ರಿ ಜಯಶ್ರೀ ಎಂಬವರ ಮನೆಯ ದನದ ಕೊಟ್ಟಿಗೆಗೆ ಮೂವರು ಅಪರಿಚಿತ ವ್ಯಕ್ತಿಗಳು ತಲವಾರುಗಳೊಂದಿಗೆ ನುಗ್ಗಿ, ತಲವಾರು ತೋರಿಸಿ ಬೆದರಿಸಿ, ಕೊಟ್ಟಿಗೆಯಲ್ಲಿದ್ದ ಸುಮಾರು 35,000ರೂ. ಮೌಲ್ಯದ 3 ಹಸುಗಳನ್ನು ಕಳ್ಳತನ ಮಾಡಿರುವ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ads on article

Advertise in articles 1

advertising articles 2

Advertise under the article