![]() |
| ಭರತ್ ಕುಮ್ಡೇಲು |
ಮಂಗಳೂರು: ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್, ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮಂಗಳೂರು ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಸೇರಿದಂತೆ ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದ. ಅಶ್ರಫ್ ಕಲಾಯಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಅದರಂತೆ ಆರೋಪಿಗಳು ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕಿತ್ತು ಆದರೆ ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದೆ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದ. ಆದ್ದರಿಂದ ಕೋರ್ಟ್ ವಾರೆಂಟ್ ಹೊರಡಿಸಿತ್ತು.
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈಗಾಗಲೇ ವಾರೆಂಟ್ ಇದ್ದು, ಕೋಕಾ ಪ್ರಕರಣ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಕೋರ್ಟ್‌ಗೆ ಶುಕ್ರವಾರ ಶರಣಾಗಿದ್ದಾನೆ.
