
ಶಾಕಿಂಗ್ : ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಮೇಲೆ ವಕೀಲನಿಂದ ಶೂ ಎಸೆಯಲು ಯತ್ನ !
06/10/2025 08:21 AM
ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೋರ್ವ ಶೂ ಎಸೆಯಲು ಯತ್ನಿಸಿದ ಘಟನೆ ನಡೆದಿದೆ.
ಆರೋಪಿ ವಕೀಲನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುತ್ತಿದ್ದಾಗ, ಸನಾತನ ಧರ್ಮದ ಅವಮಾನವನ್ನು ಭಾರತ ಸಹಿಸುವುದಿಲ್ಲ ಎಂದು ಜೋರಾಗಿ ಕೂಗಾಡಿದ್ದಾನೆ. ಪೊಲೀಸರು ಆರೋಪಿಯನ್ನು ತಕ್ಷಣವೇ ಬಂಧಿಸಿದ್ದಾರೆ.
ಮುಖ್ಯ ನ್ಯಾಯಾಧೀಶರು ಘಟನೆಯ ವೇಳೆ ಶಾಂತರಾಗಿದ್ದರು ಮತ್ತು ಯಾವುದೇ ಅಡೆತಡೆಯಿಲ್ಲದೆ ವಿಚಾರಣೆಯನ್ನು ಮುಂದುವರಿಸಿದರು ಎಂದು ತಿಳಿದುಬಂದಿದೆ.ವಕೀಲನ ಹಿನ್ನೆಲೆ ಮತ್ತಿತರ ಮಾಹಿತಿಗಳು ಇನ್ನಷ್ಟೇ ಗೊತ್ತಾಗಬೇಕಿದೆ.