ಉಡುಪಿ: ಉಡುಪಿ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳ ಸಮಿತಿ ಪರವಾಗಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರ್ಕಾರದಿಂದ ಅನುದಾನ ಒದಗಿಸುವ ಬಗ್ಗೆ ಮನವಿ ಸಲ್ಲಿಸಲಾಯಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ಅನುದಾನದ ಬಗ್ಗೆ ಸರ್ಕಾರದೊಂದಿಗೆ ಸಮಾಲೋಚಿಸಿ ವ್ಯವಸ್ಥೆಗೊಳಿಸುವ ಬಗ್ಗೆ ಭರವಸೆ ನೀಡಿದರು. ಇದೇವೇಳೆ ಈ ಬಾರಿಯ ಸಂಪ್ರದಾಯಬದ್ಧ ಕಂಬಳ ವೀಕ್ಷಣೆಗೂ ಬರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಸುಧಾಕರ್ ಹೆಗ್ಡೆ ಹೆರಂಜೆ ದೊಡ್ಡಮನೆ ಹಾಗೂ ಸಮಿತಿಯ ಕಾನೂನು ಸಲಹೆಗಾರ ಚೇರ್ಕಾಡಿ ದೊಡ್ಡಮನೆ ಪ್ರೇಮ್ ಪ್ರಸಾದ್ ಶೆಟ್ಟಿ ಇದ್ದರು.
