![]() |
| ಲಕ್ಷ್ಮೀ ಹೆಬ್ಬಾಳ್ಕರ್ |
ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಕೋರ್ಟ್ ನಿರ್ಬಂಧನೆಯನ್ನು ಹೇರಿದೆ. ಕೋರ್ಟ್ ಆದೇಶವನ್ನು ನಾವು ಪಾಲಿಸಬೇಕು, ಪಾಲಿಸುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು , ಕೋರ್ಟ್ ಆದೇಶದಿಂದ ಸರ್ಕಾರಕ್ಕೆ, ತನಿಖೆಗೆ ಹಿನ್ನಡೆ ಆಗಿದೆ ಎಂಬ ಚರ್ಚೆ ಸರಿಯಲ್ಲ. ತಡೆಯಾಜ್ಞೆಯನ್ನು ತೆರವು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಧರ್ಮಸ್ಥಳ ಪವಿತ್ರ ಕ್ಷೇತ್ರ ಎಂಬ ಸಂದೇಶ ಹೊರಗೆ ಬರಬೇಕು ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ,ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪೂರ್ಣ ಸಹಕಾರ ಕೊಡುತ್ತದೆ. ಸರಕಾರಕ್ಕೆ ಸಂಪನ್ಮೂಲದ ಕೊರತೆ ಇಲ್ಲ, ಸರಾಗವಾಗಿ ಸಾಗುತ್ತಿದೆ ಎಂದು ಸಚಿವರು ಹೇಳಿದರು.
