ಉಡುಪಿ: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ನಡೆಯುತ್ತಿರುವ ಕೋಟಿ ಗೀತಾ ಲೇಖನ ಯಜ್ಞದ ಪ್ರಯುಕ್ತ 28.11.2025 ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಉಡುಪಿ ಶ್ರೀ ಕೃಷ್ಣನ ಸನ್ನಿಧಾನಕ್ಕೆ ಆಗಮಿಸಿ, ಭಕ್ತ ಸಮೂಹದೊಂದಿಗೆ ಗೀತಾ ಪಾರಾಯಣವನ್ನು ನಡೆಸಿ ಶ್ರೀಕೃಷ್ಣನಿಗೆ ಸಮರ್ಪಿಸಲಿದ್ದಾರೆ. ಆದುದರಿಂದ ಸಾರ್ವಜನಿಕರಿಗೆ ದಿನಾಂಕ 28.11.2025 ರಂದು ಬೆಳಿಗ್ಗೆ 8:00 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀ ಕೃಷ್ಣಮಠಕ್ಕೆ ಯಾವುದೇ ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೂಚನೆಯನ್ನು ಗಮನಿಸಿ ಸಹಕರಿಸಬೇಕಾಗಿ ಶ್ರೀಮಠದ ಪ್ರಕಟಣೆ ತಿಳಿಸಿದೆ.
