![]() |
| ಚಿತ್ರಕಲಾ ಸ್ಪರ್ಧೆ ಉದ್ಘಾಟನೆ |
ಉಡುಪಿ: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ) ಉಡುಪಿ ಜಿಲ್ಲೆ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಇವರ ಜಂಟಿ ಆಶ್ರಯದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸುಮಾರು 350 ವಿದ್ಯಾರ್ಥಿಗಳು ಭಾಗವಹಿಸಿದರು. ಪುತ್ತಿಗೆ ಪರ್ಯಾಯ ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಂಘದ ಅಧ್ಯಕ್ಷ ನಾಗೇಶ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ರವಿ ಸ್ವಾಗತ ಕೋರಿದರು. ಸಂಘದ ಉಪಾಧ್ಯಕ್ಷ ಕರುಣಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪ್ರಮುಖರಾದ ಜಿ ಕೃಷ್ಣಪ್ಪ, ಗೋವಿಂದ ಪಟಗಾರ, ಜಯರಾಮ್. ಎ , ಜೀವನ್ ದಾಸ್ ಶೆಟ್ಟಿ, ಸುರೇಶ್ ಗಾಣಿಗ, ರಾಘವೇಂದ್ರ ಶೆಟ್ಟಿ, ಹುಕ್ರಪ್ಪ ಗೌಡ, ಗುರುರಾಜ್ ಕೆ , ಉಡುಪಿ ಚಿಕ್ಕಮಗಳೂರು ಸಂಸದರ ಆಪ್ತ ಸಹಾಯಕ ಶ್ರೀ ಹರೀಶ್ ಕುಮಾರ್ ಶೆಟ್ಟಿ, ಉಡುಪಿ ರನ್ನರ್ ಕ್ಲಬ್ ನ ಕಾರ್ಯದರ್ಶಿ ದಿವಾಕರ್ ಹಾಗೂ ಇತರರು ಉಪಸ್ಥಿತರಿದ್ದರು.
