'" ಧರ್ಮೇಂದ್ರ ಚೇತರಿಸಿಕೊಳ್ಳುತ್ತಿದ್ದಾರೆ " : ಸಾವಿನ ವದಂತಿಗೆ ಪುತ್ರಿ ಇಶಾ ಡಿಯೋಲ್ ಸಿಡಿಮಿಡಿ

ಧರ್ಮೇಂದ್ರ

ಮುಂಬೈ: ಹಿರಿಯ ನಟ ಧರ್ಮೇಂದ್ರ ಅವರು ನಿಧನರಾಗಿದ್ದಾರೆ ಎಂಬ ವದಂತಿಗಳನ್ನು ಅವರ ಪುತ್ರಿ, ನಟಿ ಇಶಾ ಡಿಯೋಲ್ ತಳ್ಳಿಹಾಕಿದ್ದಾರೆ. ಮಂಗಳವಾರ ಬೆಳಿಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ಇಶಾ,  ನಟ ಧರ್ಮೇಂದ್ರ ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿದ್ದು ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಪೋಸ್ಟ್‌ನಲ್ಲಿ ಇಶಾ ಡಿಯೋಲ್, "ಮಾಧ್ಯಮಗಳು ಅತಿಯಾದ ಉತ್ಸಾಹದಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ನನ್ನ ತಂದೆ ಸ್ಥಿರವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ನಮ್ಮ ಕುಟುಂಬಕ್ಕೆ ಗೌಪ್ಯತೆಯನ್ನು ನೀಡಬೇಕೆಂದು ನಾವು ಎಲ್ಲರಿಗೂ ವಿನಂತಿಸುತ್ತೇವೆ. ಅಪ್ಪನ ತ್ವರಿತ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸಿದ ಎಲ್ಲರಿಗೂ ಧನ್ಯವಾದಗಳು" ಎಂದು ಬರೆದುಕೊಂಡಿದ್ದಾರೆ.